Ezekiel 20:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಮರದ ಮತ್ತು ಕಲ್ಲಿನ ವಸ್ತುಗಳನ್ನು ಪೂಜಿಸುತ್ತಾ ಇತರ ಜನಾಂಗಗಳಂತೆ ಇರೋಣ” ಎಂದು ನೀವು ಯೋಚಿಸುತ್ತಲೇ ಇರುತ್ತೀರಿ. ನಿಮ್ಮ ಮನಸ್ಸುಗಳಲ್ಲಿರುವ ಈ ಆಲೋಚನೆಯು ಎಂದಿಗೂ ನೆರವೇರುವುದಿಲ್ಲ.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”
Kannada BSI Bible 2016
ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು.
Kannada Bible (KNCL) BSI 2016
‘ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರ, ಕಲ್ಲುಗಳ ವಿಗ್ರಹಗಳನ್ನು ಪೂಜಿಸುವೆವು’ ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆ ಎಷ್ಟು ಮಾತ್ರವೂ ನೆರವೇರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ “ನಾವು ಇತರ ಜನಾಂಗಗಳ ಹಾಗೆ ಮತ್ತು ಇತರ ದೇಶಗಳವರ ಹಾಗೆ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ನೆರವೇರದು.”