Ezekiel 20:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜೀವದಾಣೆ, ನಾನು ರಾಜನಾಗಿ ನಿಮ್ಮ ಮೇಲೆ ದೊರೆತನ ಮಾಡುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ನನ್ನ ಘಲವಾದ ಕೈಯನ್ನು ಮತ್ತು ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮ್ಮನ್ನು ದಂಡಿಸುವೆನು. ನಿಮ್ಮ ವಿರುದ್ಧವಾಗಿ ನನ್ನ ಕೋಪವನ್ನು ತೋರ್ಪಡಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು.
Kannada BSI Bible 2016
ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು;
Kannada Bible (KNCL) BSI 2016
“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ, ನಿಮ್ಮ ಮೇಲೆ ದೊರೆತನಮಾಡುವೆನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡೆಸುತ್ತೇನೆ.