Ezekiel 20:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನ್ನು ಅವರ ಸಬದೇಶದಿಂದ ತೆಗೆದುಬಿಡುವೆನು. ಅವರು ಇನ್ನೆಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಬರುವುದೇ ಇಲ್ಲ. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.
Kannada BSI Bible 2016
ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.
Kannada Bible (KNCL) BSI 2016
ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.