Ezekiel 20:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಊಸಙೇಕೆನ್ನುವವನು ಹೋಗಿ ಆರಾಊಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಘಲಿಗಳಿಂದಲೂ ಙೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”
Kannada BSI Bible 2016
ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹೋಗಿರಿ, ನಿಮ್ಮ ಬೊಂಬೆಗಳನ್ನು ಸೇವಿಸಿಕೊಳ್ಳಿರಿ; ಮುಂದಂತು ನನ್ನ ಮಾತನ್ನು ಕೇಳೇ ಕೇಳುವಿರಿ, ಇನ್ನು ಮೇಲೆ ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವದೇ ಇಲ್ಲ.
Kannada Bible (KNCL) BSI 2016
“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.