Ezekiel 20:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸಿಬಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಙೇಕೆಂದು ಅಪೇಕ್ಷಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.
Kannada BSI Bible 2016
ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದದೆಲ್ಲವನ್ನೂ ಬರಮಾಡಿಕೊಳ್ಳುವೆನು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.