Ezekiel 20:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಿಮ್ಮ ಕಾಣಿಕೆಯ ಸುವಾಸನೆಯಿಂದ ಸಂತೋಷಭರಿತನಾಗುವೆನು. ಇದು ನಿಮ್ಮನ್ನು ಹಿಂದಕ್ಕೆ ನಿಮ್ಮ ದೇಶಕ್ಕೆ ಕರೆ ತಂದಾಗ ಆಗುವದು. ನಾನು ನಿಮ್ಮನ್ನು ಅನೇಕ ದೇಶಗಳಲ್ಲಿ ಚದರಿಸಿದೆನು. ಆದರೆ ನಾನು ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಮೂಲಕ ನನ್ನ ಪವಿತ್ರತೆಯನ್ನು ಪ್ರದರ್ಶಿಸುವೆನು. ಆ ಎಲ್ಲಾ ದೇಶಗಳವರು ಇದನ್ನು ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
Kannada BSI Bible 2016
ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
Kannada Bible (KNCL) BSI 2016
ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.