Ezekiel 20:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮನ್ನು ನಿಮ್ಮ ದುಷ್ಟತಬದಿಂದ ಹೊಲಸು ಮಾಡಿಕೊಂಡದ್ದನ್ನು ಅಲ್ಲಿ ಜ್ಞಾಪಕಮಾಡಿಕೊಳ್ಳುವಿರಿ. ಆಗ ನೀವು ನಾಚಿಕೆಪಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.
Kannada BSI Bible 2016
ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮನ್ನು ಹೊಲಸುಮಾಡಿಕೊಂಡಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು ನೀವು ನಡಿಸಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.
Kannada Bible (KNCL) BSI 2016
ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.