Ezekiel 20:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ಜನಾಂಗಗಳೇ, ನೀವು ಅನೇಕ ಕೆಟ್ಟ ವಿಷಯಗಳನ್ನು ಮಾಡಿರುತ್ತೀರಿ. ಆ ದುಷ್ಕೃತ್ಯಗಳಿಗಾಗಿ ನೀವು ನಾಶವಾಗಿ ಹೋಗಙೇಕಾಗಿತ್ತು. ಆದರೆ ನನ್ನ ಒಳ್ಳೆಯ ಹೆಸರಿನ ಸಲುವಾಗಿ ನೀವು ಹೊಂದಙೇಕಾದ ಶಿಕ್ಷೆಯನ್ನು ನಾನು ನಿಮಗೆ ವಿಊಸುವುದಿಲ್ಲ. ಆಗ ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಇದಲ್ಲದೆ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗ ಗಳ ಪ್ರಕಾರವಲ್ಲ, ನಿಮ್ಮ ದುಷ್ಕ್ರಿಯೆಗಳ ಪ್ರಕಾರವಲ್ಲ, ನನ್ನ ಹೆಸರಿಗೋಸ್ಕರವೇ ನಿಮಗೆ ಮಾಡಿದಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ ನನ್ನ ಹೆಸರಿನ ನಿವಿುತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಇಸ್ರಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಸರ್ವೇಶ್ವರ ಎಂದು ನಿಮಗೆ ತಿಳಿಯುವುದು; ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳ ಪ್ರಕಾರವಲ್ಲ, ನಿಮ್ಮ ದುಷ್ಕೃತ್ಯಗಳ ಪ್ರಕಾರವಲ್ಲ, ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”