Ezekiel 20:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಉತ್ಪಾದಿಸುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.
Kannada BSI Bible 2016
ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸುರುಮರಗಳನ್ನೂ ಒಣಮರಗಳನ್ನೂ ನುಂಗಿಬಿಡುವದು; ಧಗಧಗಿಸುವ ಉರಿಯು ಆರದೆ ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕಂದಿಸುವದು.
Kannada Bible (KNCL) BSI 2016
ಆ ವನಕ್ಕೆ ಹೀಗೆ ಪ್ರವಾದಿಸು: ‘ಸರ್ವೇಶ್ವರನ ಮಾತನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು. ಅದು ನಿನ್ನಲ್ಲಿನ ಎಲ್ಲಾ ಹಸಿರುಮರಗಳನ್ನೂ ಒಣಮರಗಳನ್ನೂ ಕಬಳಿಸಿಬಿಡುವುದು; ಧಗಧಗಿಸುವ ಜ್ವಾಲೆ ಆರದೆ, ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕುಂದಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು.