Ezekiel 20:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು (ಯೆಹೆಜ್ಕೇಲ್), “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಇದನೆಐಲ್ಲಾ ಹೇಳಿದರೆ, ನಿಗೂಢವಾದ ಕಥೆಗಳನ್ನು ಹೇಳುತ್ತಿದ್ದೇನೆಂದು ಹೇಳುವರು. ಮತ್ತು ನನಗೆ ಇನ್ನೆಂದಿಗೂ ಕಿವಿಗೊಡುವದಿಲ್ಲ” ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.
Kannada BSI Bible 2016
ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೆ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ ಎಂಬದಾಗಿ ಅರಿಕೆಮಾಡಿದೆನು.
Kannada Bible (KNCL) BSI 2016
ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.