Ezekiel 20:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಇಸ್ರೇಲನ್ನು ಆರಿಸಿಕೊಂಡ ದಿವಸ ನಾನು ನನ್ನನ್ನು ಈಜಿಪ್ಟ್ ದೇಶದಲ್ಲಿ ಅವರಿಗೆ ಪ್ರಕಟಿಸಿಕೊಂಡೆನು. ನಾನು ನನ್ನ ಕೈಯನ್ನು ಮೇಲೆತ್ತಿ ಯಾಕೋಘನ ಕುಟುಂಘಕ್ಕೆ ವಾಗ್ದಾನ ಮಾಡಿದೆನು. ನಾನು ಅವರಿಗೆ, “ನಿಮ್ಮ ಒಡೆಯನಾದ ಯೆಹೋವನು ನಾನೇ.” ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಯಾವ ದಿನದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು, ಯಾಕೋಬ ಸಂತಾನದವರಿಗೆ ಮಾತುಕೊಟ್ಟು, ನಾನು ನಿಮ್ಮ ದೇವರಾದ ಯೆಹೋವನು’ ಎಂದು ಐಗುಪ್ತ ದೇಶದಲ್ಲಿ ಪ್ರಮಾಣ ಪೂರ್ವಕವಾಗಿ ತಿಳಿಯಪಡಿಸಿದೆನೋ,
Kannada BSI Bible 2016
ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ದಿವಸದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು ಯಾಕೋಬ ಸಂತಾನದವರಿಗೆ ಮಾತುಕೊಟ್ಟು ನಾನು ನಿಮ್ಮ ದೇವರಾದ ಯೆಹೋವನು ಎಂದು ಐಗುಪ್ತ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆನೋ ಆ ದಿವಸದಲ್ಲಿ ನಾನು ಅವರಿಗೆ -
Kannada Bible (KNCL) BSI 2016
ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇಸ್ರಾಯೇಲನ್ನು ಆಯ್ದುಕೊಂಡ ದಿವಸದಲ್ಲಿ ಯಾಕೋಬನ ವಂಶದವರಿಗೆ ನನ್ನ ಕೈಯೆತ್ತಿ, “ನಿಮ್ಮ ಸಾರ್ವಭೌಮ ಯೆಹೋವ ದೇವರು ನಾನೇ” ಎಂದು ಈಜಿಪ್ಟ್ ದೇಶದಲ್ಲಿ ಅವರಿಗೆ ಹೇಳಿದೆನು.