Ezekiel 20:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ನಾನು ಇಸ್ರೇಲ್ ಜನಾಂಗದವರಿಗೆ, ಅವರಲ್ಲಿದ್ದ ಅಸಹ್ಯವಾದ ಎಲ್ಲಾ ವಿಗ್ರಹಗಳನ್ನು ಬಿಸಾಡಿಬಿಡಲು ಹೇಳಿದೆನು. ಈಜಿಪ್ಟಿನ ಹೊಲಸು ವಿಗ್ರಹಗಳಿಂದ ಹೊಲಸು ಆಗಬಾರದು ಎಂದು ಹೇಳಿದೆನು. “ನಾನು ನಿಮ್ಮ ದೇವರಾದ ಯೆಹೋವನು” ಎಂಬುದಾಗಿ ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನೀವೆಲ್ಲರೂ ನಿಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಬಿಸಾಡಿಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು’” ಎಂಬುದಾಗಿ ಅವರನ್ನು ಎಚ್ಚರಿಸಿದೆನು.
Kannada BSI Bible 2016
ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಟುಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂಬದಾಗಿ ಅವರನ್ನು ಎಚ್ಚರಿಸಿದೆನು.
Kannada Bible (KNCL) BSI 2016
‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ನಾನು ಅವರಿಗೆ, “ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳ ಮುಂದೆ ಅಸಹ್ಯವಾದವುಗಳನ್ನು ಬಿಸಾಡಿ ಬಿಡಿರಿ. ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನಾಗಿರುವೆನು.”