Ezekiel 20:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಇಸ್ರೇಲರು ವಾಸವಾಗಿರುವ ಸ್ಥಳದಲ್ಲಿ ಜನರ ಮುಂದೆ ನನ್ನ ಹೆಸರನ್ನು ಅವಮಾನಕ್ಕೆ ಗುರಿಮಾಡಲು ನನಗೆ ಇಷ್ಟವಿರಲಿಲ್ಲ. ಈಜಿಪ್ಟಿನಿಂದ ಹೊರಗೆ ತರುತ್ತೇನೆಂಘ ವಾಗ್ದಾನದೊಡನೆ ನಾನು ಇಸ್ರೇಲರಿಗೆ ಪ್ರಕಟಿಸಿಕೊಂಡಿದ್ದನ್ನು ಅವರು ನೋಡಿದ್ದರು. ಆದ್ದರಿಂದ ನಾನು ಇಸ್ರೇಲರನ್ನು ಅವರ ಮುಂದೆ ನಾಶಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
Kannada BSI Bible 2016
ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡುವೆನು ಎಂಬದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.
Kannada Bible (KNCL) BSI 2016
ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.