Ezekiel 21:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ಙೊಙ್ಬೆಹಾಕು, ಕಿರುಚು, ಓ ನರಪುತ್ರನೇ, ಯಾಕೆಂದರೆ ಖಡ್ಗವು ನನ್ನ ಜನರ ಮೇಲೆ ಮತ್ತು ಇಸ್ರೇಲಿನ ಎಲ್ಲಾ ಅಊಪತಿಗಳ ಮೇಲೆ ಉಪಯೋಗಿಸಲ್ಪಡುವುದು. ಇಸ್ರೇಲನ್ನು ಆಳುವವರಿಗೆ ಯುದ್ಧವು ಬೇಕು. ಆಗ ಅವರು ಖಡ್ಗವು ಘಂದಾಗ ನನ್ನ ಜನರೊಂದಿಗೆ ಇರಘಹುದು. ಆದ್ದರಿಂದ ನಿನ್ನ ತೊಡೆಗೆ ಘಡಿದು ಗಟ್ಟಿಯಾದ ಸಬರದಿಂದ ನಿನ್ನ ದುಃಖವನ್ನು ಪ್ರದರ್ಶಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”
Kannada BSI Bible 2016
ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು; ಇದು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಎಲ್ಲಾ ಅಧಿಪತಿಗಳ ಮೇಲೆಯೂ ಇರುವದು; ಕತ್ತಿಯ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವದು. ಆದದರಿಂದ ತೊಡೆಯನ್ನು ಬಡಿದುಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.
Kannada Bible (KNCL) BSI 2016
ನರಪುತ್ರನೇ, ಕೂಗು, ಗೋಳಾಡು, ಬಡಿದುಕೋ ಎದೆ! ಎರಗಿದೆ ಆ ಖಡ್ಗ ನನ್ನ ಜನರ ಮೇಲೆ ಇಸ್ರಯೇಲಿನ ಅರಸರೆಲ್ಲರ ಮೇಲೆ ತುತ್ತಾಗುವರು ಅದಕ್ಕೆ ಜನನಾಯಕರು ಜನರೊಂದಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.