Ezekiel 21:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ಬಾಬಿಲೋನಿನ ರಾಜನ ಖಡ್ಗವು ಇಸ್ರೇಲಿಗೆ ಬರಲು ಎರಡು ಮಾರ್ಗಗಳ ನಕ್ಷೆಯನ್ನು ರಚಿಸು. ಅವರೆಡೂ ಒಂದೇ ಪ್ರದೇಶದಿಂದ (ಬಾಬಿಲೋನಿನಿಂದ) ಆರಂಭವಾಗುತ್ತವೆ. ಪ್ರತಿಯೊಂದು ರಸ್ತೆಯ ಆರಂಭದಲ್ಲಿ ಸೂಚನೆ ಕಂಘವನ್ನು ಚಿತ್ರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.
Kannada BSI Bible 2016
ಮನುಷ್ಯಪುತ್ರನೇ, ಬಾಬೆಲಿನ ಅರಸನ ಕತ್ತಿಯು ಬರುವ ಹಾಗೆ ನೀನು ಎರಡು ಮಾರ್ಗಗ ಳನ್ನು ನೇಮಿಸಿಕೋ; ಅವೆರಡೂ ಒಂದೇ ದೇಶದಿಂದ ಹೊರಡಬೇಕು; ಇದರಲ್ಲಿ ಒಂದು ಸ್ಥಳವನ್ನು ಆರಿ ಸಿಕೋ, ಅದು ಪಟ್ಟಣದ ಮಾರ್ಗದ ಪ್ರಾರಂಭದಲ್ಲಿ ಆರಿಸಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.
Kannada Bible (KNCL) BSI 2016
ಬಾಬಿಲೋನಿನ ಅರಸನ ಖಡ್ಗ ಬರುವುದಕ್ಕೆ ಎರಡು ದಾರಿಗಳುಳ್ಳ ನಕ್ಷೆಯನ್ನು ಬರೆ; ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಬಾಬಿಲೋನಿನ ಅರಸನ ಖಡ್ಗವು ಬರುವ ಹಾಗೆ ನೀನು ಎರಡು ಮಾರ್ಗಗಳನ್ನು ನೇಮಿಸಿಕೋ. ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟ ಹಾಗಿರಲಿ. ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.