Ezekiel 21:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಘಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.
Kannada BSI Bible 2016
ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇಮ್ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ ಬಾಯಿಬಿಟ್ಟು ಸಂಹಾರಧ್ವನಿಗೈದು ಕೂಗಿ ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ ದಿಬ್ಬಹಾಕಿ ಒಡ್ಡುಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.
Kannada Bible (KNCL) BSI 2016
ಜೆರುಸಲೇಮ್ ಗುರುತಿನ ಬಾಣ ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ಬಾಯಿತೆರೆದು ಸಂಹಾರ ಧ್ವನಿಮಾಡಿ, ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ದಿಬ್ಬಹಾಕಿ, ಒಡ್ಡು ಕಟ್ಟಬೇಕೆಂಬ ಸೂಚನೆ ಅದರಿಂದ ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.