Ezekiel 21:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲ್ ಜನರಿಗೆ ಆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನ್ನು ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.”
Kannada BSI Bible 2016
ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬೈಲಿಗೆ ತರಲು [ಅವನ ಕೈಗೆ] ಸಿಕ್ಕಿಬೀಳುವರು.
Kannada Bible (KNCL) BSI 2016
ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು.