Ezekiel 21:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಮುಂಡಾಸವನ್ನು ತೆಗೆ! ನಿನ್ನ ಕಿರೀಟವನ್ನು ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಊಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ಎತ್ತಿಹಾಕು! ಎಲ್ಲವೂ ವ್ಯತ್ಯಸ್ತವಾಗಲಿ; ಕೆಳಗಿನದನ್ನು ಮೇಲೆ ಮಾಡು, ಮೇಲಿನದನ್ನು ಕೆಳಗೆ ಮಾಡು;
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿನ್ನ ರುಮಾಲನ್ನು ಕಿತ್ತುಬಿಡು, ಕಿರೀಟವನ್ನು ತೆಗೆದುಹಾಕು. ಎಲ್ಲವೂ ಮೊದಲಿದ್ದ ಹಾಗೆ ಇರುವುದಿಲ್ಲ; ಕೆಳಗಿರುವುದನ್ನು ಮೇಲೆ ಸೇರಿಸಲಾಗುವುದು, ಮೇಲಿರುವುದನ್ನು ಕೆಳಕ್ಕಿಳಿಸಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು.