Ezekiel 21:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಘಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.
Kannada BSI Bible 2016
ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲಿಯೂ ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಖಡ್ಗ, ಖಡ್ಗ, ಸಂಹರಿಸುವದಕ್ಕೆ ಹಿರಿದಿದೆ, ವಿುಂಚುವಂತೆ ತೀರಾತಿಕ್ಕಿದೆ;
Kannada Bible (KNCL) BSI 2016
“ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.