Ezekiel 21:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಓ ಖಡ್ಗವೇ, ನಿನ್ನ ಕುರಿತು ಅವರು ಸುಳ್ಳುದರ್ಶನಗಳನ್ನು ಕಾಣುವರು. ನಿನ್ನ ಕುರಿತು ಅವರು ಹೇಳುವ ಕಣಿಯು ದಾರಿ ತಪ್ಪಿಸುತ್ತದೆ. ಅದು ಕೇವಲ ಸುಳ್ಳುಗಳ ಕಂತೆ. ಓ ಖಡ್ಗವೇ, ನಿನ್ನನ್ನು ದುಷ್ಟರ ಕುತ್ತಿಗೆಗಳ ಮೇಲೆ ಇರಿಸಲಾಗುವುದು. ಬೇಗನೇ ಅವರು ಹೆಣಗಳಾಗಿ ಬೀಳುವರು. ಅವರ ಸಮಯವು ಘಂದಿದೆ. ಇದು ಅವರ ಅಂತ್ಯದಂಡನೆಯ ಸಮಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.
Kannada BSI Bible 2016
ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಅಮ್ಮೋನೇ,] ನಿನ್ನ ಜೋಯಿಸರು ವಿುಥ್ಯೆಯನ್ನು ಸಾಕ್ಷಾತ್ಕರಿಸಿ ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಹತ್ತರಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿಹೋಗುವಿ.
Kannada Bible (KNCL) BSI 2016
ಅಮ್ಮೋನೇ, ನಿನ್ನ ಜೋಯಿಸರು ಮಿಥ್ಯೆಯನ್ನು ಕಲ್ಪಿಸಿಕೊಂಡು ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಸಮೀಪಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು; ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಬೀಳುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.