Ezekiel 21:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರತೆಗೆಯುವೆನು. ನಿನ್ನಲ್ಲಿರುವ ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ತೆಗೆದುಬಿಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.
Kannada BSI Bible 2016
ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಿಬಿಡುವೆನು.
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ - ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಿಬಿಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು.