Ezekiel 21:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.
Kannada BSI Bible 2016
ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ ರೋಷಾಗ್ನಿಯನ್ನು ಊದಿ ನಿನ್ನನ್ನು ಮೃಗಪ್ರಾಯರೂ ಹಾಳುಮಾಡುವದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.
Kannada Bible (KNCL) BSI 2016
ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.