Ezekiel 21:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ನಿನ್ನಿದ ಕಡಿದುಹಾಕುವೆನು. ನನ್ನ ಖಡ್ಗವನ್ನು ಒರೆಯಿಂದ ತೆಗೆದು ದಕ್ಷಿಣದಿಂದ ಉತ್ತರದ ತನಕ ಇರುವ ಎಲ್ಲಾ ಜನರಿಗೆ ವಿರುದ್ಧವಾಗಿ ಉಪಯೋಗಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು.
Kannada BSI Bible 2016
ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಬೇಕೆಂದಿರುವದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ತೆಂಕಲಿಂದ ಬಡಗಲವರೆಗೆ ಸಕಲನರಪ್ರಾಣಿಗಳ ಮೇಲೆ ಬೀಳುವದು;
Kannada Bible (KNCL) BSI 2016
ನಾನು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗ ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು.