Ezekiel 21:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ನನ್ನ ಪರವಾಗಿ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ““ನೋಡು, ಒಂದು ಖಡ್ಗ, ಹರಿತವಾದ ಖಡ್ಗ, ಆ ಖಡ್ಗವು ಉಜ್ಜಿ ಶುಭ್ರಮಾಡಲ್ಪಟ್ಟಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ!
Kannada BSI Bible 2016
ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ಇಂತೆನ್ನುತ್ತಾನೆ ಎಂಬದಾಗಿ ನುಡಿದು ಹೀಗೆ ಸಾರು - ಆಹಾ, ಖಡ್ಗ, ಖಡ್ಗ, ಸಾಣೆಹಿಡಿದಿದೆ, ತಿಕ್ಕಿದೆ.
Kannada Bible (KNCL) BSI 2016
“ನರಪುತ್ರನೇ, ಪ್ರವಾದಿಸು ಸರ್ವೇಶ್ವರ ಹೀಗೆನ್ನುತ್ತಾರೆಂದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಪ್ರವಾದಿಸಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು: “ ‘ಆ ಒಂದು ಖಡ್ಗವು ಹದಮಾಡಲಾಗಿದೆ; ಮೆರುಗೂ ಸಹ ಮಾಡಲಾಗಿದೆ.