Ezekiel 22:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮನ್ನು ಶಿಕ್ಷಿಸಲು ಘಂದಾಗ ನೀವು ಧೈರ್ಯಶಾಲಿಗಳಾಗುವಿರಾ? ನಿಮ್ಮಲ್ಲಿ ಘಲವಿರುವದೊ? ನಾನೇ ಯೆಹೋವನು. ನಾನು ಹೇಳಿದ ಪ್ರಕಾರ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.
Kannada BSI Bible 2016
ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡೀಯೋ, ಕೈಗಳನ್ನು ಬಲಪಡಿಸಿಕೊಂಡೀಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ನಡಿಸುತ್ತೇನೆ.
Kannada Bible (KNCL) BSI 2016
ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವುದೋ? ನಿನ್ನ ಕೈಗಳು ಬಲವಾಗಿರುವುವೋ? ಯೆಹೋವ ದೇವರಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುವೆನು.