Ezekiel 22:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿಮ್ಮನ್ನು ಜನಾಂಗಗಳ ಮಧ್ಯೆ ಚದರಿಸಿಬಿಡುವೆನು. ನಿಮ್ಮನ್ನು ಘಹುದೇಶಗಳ ಮಧ್ಯೆ ಅಟ್ಟಿಬಿಡುವೆನು. ಈ ನಗರದಲ್ಲಿರುವ ಅಸಹ್ಯ ವಸ್ತುಗಳನೆಐಲ್ಲಾ ಸಂಪೂರ್ಣವಾಗಿ ನಾಶಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.
Kannada BSI Bible 2016
ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಟ್ಟು ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.
Kannada Bible (KNCL) BSI 2016
ನಾನು ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶವಿದೇಶಗಳಿಗೆ ತೂರಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದುಹಾಕುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು. ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.