Ezekiel 22:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ಇಸ್ರೇಲ್ ಜನಾಂಗವು ನನ್ನ ಪಾಲಿಗೆ ನಿಷ್ಪ್ರಯೋಜಕವಾಗಿದೆ. ಅವರು ತಾಮ್ರದಂತೆ, ತವರದಂತೆ, ಕಬ್ಬಿಣದಂತೆ ಮತ್ತು ಸೀಸದಂತೆ ಮತ್ತು ಬೆಳ್ಳಿಯನ್ನು ಕುಲುಮೆಯಲ್ಲಿ ಕರಗಿಸಿ ಶುದ್ಧೀಕರಿಸಿದಾಗ ಉಳಿಯುವ ಕಂದುಬೆಳ್ಳಿಯಂತೆ ಇದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.
Kannada BSI Bible 2016
ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಬೆಳ್ಳಿ.
Kannada Bible (KNCL) BSI 2016
“ನರಪುತ್ರನೇ, ಇಸ್ರಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಲೋಹ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ ಕಸದ ಹಾಗಾದರೂ, ಅವರೆಲ್ಲರೂ ಗುಹೆಯಲ್ಲಿರುವ ತಾಮ್ರ, ತವರ, ಕಬ್ಬಿಣದ ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಸದ ಹಾಗೆಯೂ ಇದ್ದಾರೆ.