Ezekiel 22:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ. ‘ನೀವೆಲ್ಲರೂ ಪ್ರಯೋಜನವಿಲ್ಲದ ಲೋಹವಾಗಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಜೆರುಸಲೇಮಿನೊಳಗೆ ಒಟ್ಟುಗೂಡಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಯೆರೂಸಲೇಮಿನೊಳಕ್ಕೆ ಸೇರಿಸುವೆನು.
Kannada BSI Bible 2016
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವೆಲ್ಲರು ಕಸರಾಗಿರುವದರಿಂದ ಇಗೋ, ನಿಮ್ಮನ್ನು ಯೆರೂಸಲೇವಿುನೊಳಕ್ಕೆ ಕೂಡಿಸುವೆನು.
Kannada Bible (KNCL) BSI 2016
ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಜೆರುಸಲೇಮಿನ ಒಳಕ್ಕೆ ಸೇರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೆಲ್ಲರೂ ಕೆಟ್ಟವರಾಗಿರುವುದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.