Ezekiel 22:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲಸಗಾರರು ಬೆಳ್ಳಿ, ತಾಮ್ರ, ಸೀಸ, ತವರ, ಕಬ್ಬಿಣ ಇವುಗಳನೆಐಲ್ಲಾ ಬೆಂಕಿಗೆ ಹಾಕುವರು. ಬೆಂಕಿಯನ್ನೂದಿ ಶಾಖ ಹೆಚ್ಚು ಮಾಡುವರು. ಆಗ ಲೋಹಗಳು ಕರಗಲು ಪ್ರಾರಂಭವಾಗುವವು. ಅದೇ ರೀತಿಯಲ್ಲಿ ನಾನು ನಿಮ್ಮನ್ನು ನನ್ನ ಬೆಂಕಿಯಲ್ಲಿ ಹಾಕಿ ಕರಗಿಸುವೆನು. ನನ್ನ ರೌದ್ರವೇ ಆ ಬೆಂಕಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ,, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು.
Kannada BSI Bible 2016
ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಕೂಡಿಸಿ ಊದಿ ಉರಿಹತ್ತಿಸಿ ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಕೂಡಿಸಿ ಇಟ್ಟುಬಿಟ್ಟು ಕರಗಿಸುವೆನು.
Kannada Bible (KNCL) BSI 2016
ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪಾಗ್ನಿಯಲ್ಲಿ ಇಟ್ಟು ಕರಗಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒರೆಯೊಳಗೆ ಕೂಡಿಸಿ, ಅದಕ್ಕೆ ಬೆಂಕಿಯನ್ನು ಊದಿ ಕರಗಿಸುವರೋ, ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿ ಮತ್ತು ನನ್ನ ರೋಷದಲ್ಲಿ ಒಟ್ಟುಗೂಡಿಸಿ ನಿಮ್ಮನ್ನು ನಗರದೊಳಗೆ ಹಾಕಿ ಕರಗಿಸುತ್ತೇನೆ.