Ezekiel 22:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನ ಪ್ರವಾದಿಗಳು ತಾನು ಙೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
Kannada BSI Bible 2016
ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ನಾಡಿನೊಳಗೆ ಪ್ರವಾದಿಗಳು ಒಳಸಂಚುಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
Kannada Bible (KNCL) BSI 2016
ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.