Ezekiel 22:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.
Kannada BSI Bible 2016
ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಧಾರಣರು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ ವಿದೇಶಿಗಳನ್ನು ಅನ್ಯಾಯವಾಗಿ ಅರೆದು ಬಿಟ್ಟಿದ್ದಾರೆ.
Kannada Bible (KNCL) BSI 2016
ಜನಸಾಮಾನ್ಯರೂ ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿದ್ದಾರೆ, ವಿದೇಶಿಗಳನ್ನು ಅನ್ಯಾಯವಾಗಿ ನಸುಕಿಬಿಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ.