Ezekiel 22:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.
Kannada BSI Bible 2016
ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶರಕ್ಷಣೆಗಾಗಿ ಪೌಳಿಯ ಒಡಕಿನಲ್ಲಿ ನಿಲ್ಲುವದಕ್ಕೂ ಗೋಡೆಯನ್ನು ಗಟ್ಟಿಮಾಡುವದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.
Kannada Bible (KNCL) BSI 2016
ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ.