Ezekiel 22:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”
Kannada BSI Bible 2016
ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”