Ezekiel 22:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನ್ನು ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನ್ನು ಮಾಡಿಕೊಂಡಿದ್ದೀರಿ. ಆದ್ದರಿಂದ ನೀವು ಅಶುದ್ಧರು. ನಿಮ್ಮನ್ನು ಶಿಕ್ಷಿಸುವ ಸಮಯ ಈಗ ಘಂದಿದೆ. ನಿಮ್ಮ ಅಂತ್ಯವು ಘಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿನ್ನನ್ನು ಗೇಲಿಮಾಡುವರು. ಎಲ್ಲಾ ದೇಶಗಳು ನಿಮ್ಮನ್ನು ನೋಡಿ ನಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.
Kannada BSI Bible 2016
ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸುರಿಸಿದ ರಕ್ತದಿಂದ ಅಪರಾಧಿಯೂ ಮಾಡಿಕೊಂಡ ಬೊಂಬೆಗಳಿಂದ ಹೊಲಸೂ ಆಗಿ ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿದ್ದೀ; ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.
Kannada Bible (KNCL) BSI 2016
ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿರುವೆ. ಹೀಗೆ ನಿನ್ನ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಚೆಲ್ಲಿದ ನಿನ್ನ ರಕ್ತದಿಂದ ನೀನು ಅಪರಾಧಿಯಾದೆ; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧನಾದೆ; ನಿನ್ನ ದಿನಗಳನ್ನು ಸಮೀಪಿಸಿರುವೆ; ಮತ್ತು ನಿಮ್ಮ ವರ್ಷಗಳ ಅಂತ್ಯವು ಬಂದಿದೆ. ಆದ್ದರಿಂದ ನಿನ್ನನ್ನು ಇತರ ಜನಾಂಗಗಳಿಗೆ ನಾಚಿಕೆಯಾಗಿಯೂ, ಎಲ್ಲಾ ದೇಶಗಳಿಗೂ ನಿಂದೆಯಾಗಿಯೂ ಮಾಡಿದ್ದೇನೆ.