Ezekiel 22:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೂರ ಮತ್ತು ಹತ್ತಿರದಲ್ಲಿರುವ ಎಲ್ಲರೂ ನಿನ್ನನ್ನು ಹಾಸ್ಯ ಮಾಡುವರು. ನಿನ್ನ ಹೆಸರನ್ನು ನೀನು ಕೆಡಿಸಿದ್ದೀ. ನೀನು ಗದ್ದಲದಿಂದ ತುಂಬಿಹೋಗಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶುದ್ಧವಾದ ನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ, ದೂರದವರೂ ನಿನ್ನನ್ನು ಹಾಸ್ಯಮಾಡುವರು.
Kannada BSI Bible 2016
ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಸರುಗೆಟ್ಟ ಪುರಿಯೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ ದೂರದವರೂ ನಿನ್ನನ್ನು ಹಾಸ್ಯಮಾಡುವರು.
Kannada Bible (KNCL) BSI 2016
ಕುಖ್ಯಾತನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ಪಟ್ಟಣವೇ, ಹತ್ತಿರದವರೂ ದೂರದವರೂ ನಿನ್ನನ್ನು ಹಾಸ್ಯಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುಖ್ಯಾತ ನಗರವೇ, ಬಹಳ ತೊಂದರೆಗೊಳಗಾದವಳೇ, ನಿನ್ನನ್ನು ಹತ್ತಿರದವರೂ, ದೂರದವರೂ ಅಪಹಾಸ್ಯ ಮಾಡುವರು.