Ezekiel 23:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಓಹೊಲೀಘಳೇ, ನಿನ್ನ ಪ್ರಿಯತಮರಲ್ಲಿ ಕೆಲವರು ನಿನಗೆ ಅಸಹ್ಯವಾಗಿದ್ದಾರೆ. ಆದರೆ ನಾನು ಆ ಪ್ರಿಯತಮರನ್ನು ಇಲ್ಲಿಗೆ ಕರೆದುಕೊಂಡು ಬರುವೆ. ಅವರು ನಿನ್ನನ್ನು ಸುತ್ತುವರಿಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯಾರಿಂದ ನಿನ್ನ ಆಶೆ ತೊಲಗಿತೋ, ಆ ನಿನ್ನ ಪ್ರಿಯನನ್ನು ನಾನು ನಿನ್ನ ವಿರುದ್ಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ನಿನ್ನ ವಿರುದ್ಧವಾಗಿ ತರುತ್ತೇನೆ.
Kannada BSI Bible 2016
ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು, ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯಾವ ವಿುಂಡರಿಂದ ನಿನ್ನ ಆಶೆ ತೊಲಗಿತೋ ಆ ವಿುಂಡರನ್ನು ಅಂದರೆ ಮನೋಹರ ಯುವಕರೂ ಯಾರೂ ತಪ್ಪದೆ ನಾಯಕೋಪನಾಯಕರೂ ಪ್ರಭುಪ್ರಧಾನರೂ ಅಶ್ವಾರೂಢರೂ ಆದ ಬಾಬೆಲಿನವರು,
Kannada Bible (KNCL) BSI 2016
ಹೀಗಿರಲು, ಒಹೊಲೀಬಳೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ಯಾವ ಮಿಂಡರಿಂದ ನಿನ್ನ ಆಸೆ ತೊಲಗಿತೋ ಆ ಮಿಂಡರನ್ನು ಅಂದರೆ, ಮನೋಹರ ಯುವಕರು, ಎಲ್ಲ ನಾಯಕ ಉಪನಾಯಕರು, ಪ್ರಭುಪ್ರಧಾನರು, ಅಶ್ವಾರೂಢರು ಆದ ಬಾಬಿಲೋನಿನವರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಒಹೊಲೀಬಳೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಯಾರಿಂದ ನಿನ್ನ ಮನಸ್ಸಿನಲ್ಲಿ ಜಿಗುಪ್ಸೆ ಹುಟ್ಟಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ವಿರೋಧವಾಗಿ ತರುತ್ತೇನೆ.