Ezekiel 23:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅವರು ನಿನ್ನನ್ನು ಎಷ್ಟು ದೆಬಷೀಸುವರೆಂದು ನಿನಗೆ ತೋರಿಸುವರು. ನೀನು ದುಡಿದವುಗಳನೆಐಲ್ಲ ಅವರು ಕಿತ್ತುಕೊಳ್ಳುವರು. ನಿನ್ನನ್ನು ಬೆತ್ತಲೆಮಾಡಿ ಬಿಟ್ಟುಬಿಡುವರು. ಜನರು ನಿನ್ನ ಪಾಪಗಳನ್ನು ಪರಿಪೂರ್ಣವಾಗಿ ನೋಡುವರು. ನೀನು ಸೂಳೆಯಂತೆ ವರ್ತಿಸಿದ್ದನ್ನು ಅವರು ನೋಡುವರು. ನಿನ್ನ ನೀಚತನವೂ ನಿನ್ನ ಸೂಳೆತನವೂ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.
Kannada BSI Bible 2016
ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು ನೀನು ದುಡಿದದ್ದನ್ನೆಲ್ಲಾ ಅಪಹರಿಸಿ ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಸೂಳೆತನವು, ಹೌದು ನಿನ್ನ ಪುಂಡಾಟವೂ ಸೂಳೆತನವೂ ಬೈಲಿಗೆ ಬರುವವು.
Kannada Bible (KNCL) BSI 2016
ಅವರ ಕೈಗೆ ನಿನ್ನನ್ನು ನಾನು ಒಪ್ಪಿಸುವೆನು. ಅವರು ನಿನ್ನಲ್ಲಿ ಹಗೆ ತೀರಿಸಿಕೊಳ್ಳುವರು. ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಹಾದರವು, ಹೌದು, ನಿನ್ನ ಲಂಪಟತನ ಹಾಗು ಸೂಳೆತನ ಬಯಲಿಗೆ ಬರುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿನ್ನ ವಿಷಯದಲ್ಲಿ ಹಗೆತೀರಿಸಿಕೊಳ್ಳುವರು. ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವುದು.