Ezekiel 23:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ನಿನ್ನ ಅಕ್ಕನ ಲೋಟದಿಂದ ಕುಡಿಯುವೆ. ಆ ಲೋಟವು ಆಳವಾಗಿಯೂ ಅಗಲವಾಗಿಯೂ ಇದ್ದು ಪೂರ್ತಿ ತುಂಬಿದೆ (ಶಿಕ್ಷೆ). ಜನರು ನಿನ್ನನ್ನು ನೋಡಿ ನಗಾಡುವರು. ನಿನ್ನನ್ನು ಕಂಡು ಹಾಸ್ಯ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಉದ್ದವೂ, ಅಗಲವೂ, ಬಹಳ ತುಂಬುವ, ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ, ಕುಚೋದ್ಯಕ್ಕೂ ಗುರಿಯಾಗುವಿ.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಉದ್ದವೂ ಅಗಲವೂ ಬಹಳ ಹಿಡಿಯುವದೂ ಆದ ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು ಹಾಸ್ಯಕ್ಕೂ ಕುಚೋದ್ಯಕ್ಕೂ ಗುರಿಯಾಗುವಿ.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಆಳವೂ ಅಗಲವೂ ಬಹಳ ಹಿಡಿಯುವುದೂ ಆದ ನಿನ್ನ ಅಕ್ಕನ ಪಾತ್ರೆಯಲ್ಲೇ ನೀನೂ ಕುಡಿದು ಹಾಸ್ಯಕ್ಕೂ ಕುಚೋದ್ಯಕ್ಕೂ ಗುರಿಯಾಗುವೆ. ಸಮಾರಿಯಳೆಂಬ ನಿನ್ನ ಅಕ್ಕನು ಕುಡಿದ ಬೆಚ್ಚುಬೆರಗಿನಾ ಕೊಡದಿಂದಲೇ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವೆ. ನೀನು ಹಾಸ್ಯಕ್ಕೂ ನಿಂದೆಗೂ ಗುರಿಯಾಗುವೆ. ಅದೇ ನಿನಗೆ ಹೆಚ್ಚಾಗುವುದು.