Ezekiel 23:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಅಮಲೇರಿದವನ ಹಾಗೆ ತೂರಾಡುವೆ. ನೀನು ಕುಗ್ಗಿಹೋಗುವೆ. ಆ ಲೋಟವು ನಾಶನದ ಮತ್ತು ಹಾಳುಮಾಡುವ ಲೋಟ. ನಿನ್ನ ಅಕ್ಕ ಕುಡಿದ ಪಾತ್ರೆಯಂತಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು. ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ.
Kannada BSI Bible 2016
ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಬೆಚ್ಚುಬೆರಗಿನ ಪಾತ್ರೆಯಲ್ಲಿ ನೀನೂ ಕುಡಿದು ಕುಡಿದು ಪೂರಾ ಅಮಲೇರಿ ದುಃಖಭರಿತಳಾಗುವಿ.
Kannada Bible (KNCL) BSI 2016
ನೀನೂ ಕುಡಿದು, ಕುಡಿದು ಪೂರಾ ಅಮಲೇರಿ ದುಃಖಭರಿತಳಾಗುವೆ. ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶವೂ ಆಗುವುದು. ನೀನು ಮತ್ತಿನಿಂದಲೂ ದುಃಖದಿಂದಲೂ ತುಂಬಿರುವೆ.