Ezekiel 23:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನನ್ನು ಬೆನ್ನ ಹಿಂದಕ್ಕೆ ಎಸೆದು ಮರೆತುಬಿಟ್ಟದ್ದರಿಂದ ನಿನ್ನ ಪುಂಡಾಟದ ಮತ್ತು ಸೂಳೆತನದ ಫಲವನ್ನು ನೀನೂ ಅನುಭವಿಸಬೇಕು.
Kannada Bible (KNCL) BSI 2016
ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.”