Ezekiel 23:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಘಳನ್ನು ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಬರಿಗೊಳಿಸುವ ಅವರ ದುಷ್ಟತನವನ್ನು ಅವರಿಗೆ ತಿಳಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.
Kannada BSI Bible 2016
ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೋವನು ನನಗೆ ಹೀಗೆ ಹೇಳಿದನು - ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.
Kannada Bible (KNCL) BSI 2016
ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೇ? ಹಾಗಾದರೆ ಅವರ ದುರಾಚಾರಗಳನ್ನು ಅವರಿಗೆ ತಿಳಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸುವೆಯೋ? ಹೌದು, ಅವರ ಅಸಹ್ಯಕರ ಕೃತ್ಯಗಳನ್ನು ಅವರಿಗೆ ತಿಳಿಸು.