Ezekiel 23:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿರಿಯ ಅಕ್ಕನ ಹೆಸರು ಒಹೊಲ. ತಂಗಿಯ ಹೆಸರು ಒಹೊಲೀಘ. ಅವರಿಬ್ಬರೂ ನನ್ನ ಹೆಂಡತಿಯರಾದರು. ಅವರು ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಹೆತ್ತರು. ಒಹೊಲ ಎಂದರೆ ಸಮಾರ್ಯ; ಮತ್ತು ಒಹೊಲೀಬ ಎಂದರೆ ಜೆರುಸಲೇಮ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.
Kannada BSI Bible 2016
ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಹೆಸರುಗಳೇನಂದರೆ, ಒಹೊಲ ಎಂಬದು ಅಕ್ಕನದು, ಒಹೊಲೀಬ ಎಂಬದು ತಂಗಿಯದು; ಅವರು ನನ್ನ ಹೆಂಡರಾಗಿ ಗಂಡುಹೆಣ್ಣುಮಕ್ಕಳನ್ನು ಹೆತ್ತರು. (ಒಹೊಲ ಎಂಬದು ಸಮಾರ್ಯವನ್ನೂ, ಒಹೊಲೀಬ ಎಂಬದು ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.)
Kannada Bible (KNCL) BSI 2016
ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರುಗಳ ಹೆಸರುಗಳೇನೆಂದರೆ ಒಹೊಲ ಎಂಬವಳು ದೊಡ್ಡವಳು. ಒಹೊಲೀಬ ಎಂಬವಳು ಚಿಕ್ಕವಳು. ಅವರು ನನ್ನವರಾಗಿದ್ದು ಪುತ್ರಪುತ್ರಿಯರನ್ನು ಹೆತ್ತರು; ಅವರ ಹೆಸರುಗಳಾದ ಒಹೊಲ ಎಂಬುದು ಸಮಾರ್ಯವು ಮತ್ತು ಒಹೊಲೀಬ ಎಂಬುದು ಯೆರೂಸಲೇಮು ಆಗಿದೆ.