Ezekiel 23:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಅಮೋಘವಾದ ಮಂಚದಲ್ಲಿ ಕುಳಿತುಕೊಂಡೆ. ಅದರ ಮುಂದೆ ಸಿದ್ಧಪಡಿಸಲ್ಪಟ್ಟಿದ್ದ ಮೇಜಿತ್ತು. ಆ ಮೇಜಿನ ಮೇಲೆ ನನ್ನ ಧೂಪ ಮತ್ತು ಎಣ್ಣೆಯನ್ನು ಇಟ್ಟಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.
Kannada BSI Bible 2016
ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿದ್ದಿ; ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿದ್ದಿ.
Kannada Bible (KNCL) BSI 2016
ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿರುವೆ. ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ನನ್ನ ಧೂಪವನ್ನು ನನ್ನ ಎಣ್ಣೆಯನ್ನು ಇಟ್ಟಿದ್ದ ಮೇಜನ್ನು ಸಿದ್ಧಮಾಡಿದೆ.