Ezekiel 23:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಶ್ಚಿಂತೆಯುಳ್ಳ ಗುಂಪಿನ ಆನಂದಪೂರ್ಣವಾದ ಗದ್ದಲವು ಆಕೆಯ ಸುತ್ತಲೂ ಇತ್ತು. ಔತಣಕ್ಕೆ ಅನೇಕರು ಘಂದರು. ಮರುಭೂಮಿಯ ಕಡೆಯಿಂದ ಜನರು ಬರುತ್ತಿರುವಾಗಲೇ ಅಮಲೇರಿಕೊಂಡು ಘಂದರು. ಅವರು ಘಳೆಗಳನ್ನು, ಸುಂದರವಾದ ಕಿರೀಟಗಳನ್ನು ಹೆಂಗಸರಿಗೆ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.
Kannada BSI Bible 2016
ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ವಿನೋದಪಡುತ್ತಿರುವ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡಿಕರು ನಾಡಾಡಿಗರೊಂದಿಗೆ ಸೇರಿ ಅವರಿಬ್ಬರ ಕೈಗೆ ಕಡಗವನ್ನು ತೊಡಿಸಿ ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.
Kannada Bible (KNCL) BSI 2016
ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡುಕರು ನಾಡಾಡಿಗರೊಂದಿಗೆ ಸೇರಿ ಅಸ್ಸೀರಿಯರಿಬ್ಬರ ಕೈಗೆ ಕಡಗವನ್ನು ತೊಡಿಸಿ, ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವಳ ಸಂಗಡ ವಿನೋದಪ್ರಿಯ ಸಮೂಹದ ಶಬ್ದವು ಇತ್ತು. ಸಾಧಾರಣ ಮನುಷ್ಯರ ಸಂಗಡ ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಆ ಮಹಿಳೆ ಮತ್ತು ಅವಳ ಸಹೋದರಿಯ ಕೈಗಳ ಮೇಲೆ ಕಡಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.