Ezekiel 23:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ಜನರನ್ನು ಒಟ್ಟುಗೂಡಿಸು. ಅವರು ಒಟ್ಟಾಗಿ ಸೇರಿ ಒಹೊಲ ಮತ್ತು ಒಹೊಲೀಬರನ್ನು ಶಿಕ್ಷಿಸಲಿ. ಆ ಜನರು ಈ ಸ್ತ್ರೀಯರನ್ನು ಶಿಕ್ಷಿಸಿ ಗೇಲಿ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಕೂಡಿಸಿ ಇವರನ್ನು ಸೂರೆಗೆ ಸಿಕ್ಕಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಸೇರಿಸುವೆನು. ಇವರನ್ನು ಸೂರೆಗೆ ಒಳಗಾಗಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು.