Ezekiel 23:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನ್ನು ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನ್ನು ತುಂಡುತುಂಡು ಮಾಡುವರು. ಅವರ ಮಕ್ಕಳನ್ನು ಕೊಂದು ಅವರ ಮನೆಗಳನ್ನು ಸುಟ್ಟುಹಾಕುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.
Kannada BSI Bible 2016
ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭೆಯವರು ಇವರ ಮೇಲೆ ಕಲ್ಲೆಸೆದು ಕತ್ತಿಗಳಿಂದ ಇವರನ್ನು ಸಂಹರಿಸಿ ಇವರ ಗಂಡು ಹೆಣ್ಣುಮಕ್ಕಳನ್ನು ಕೊಂದು ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.
Kannada Bible (KNCL) BSI 2016
ಸಭೆಯವರು ಇವರ ಮೇಲೆ ಕಲ್ಲುತೂರಿ, ಕತ್ತಿಗಳಿಂದ ಸಂಹರಿಸಿ, ಇವರ ಗಂಡುಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಖಡ್ಗಗಳಿಂದ ಕೊಯ್ದು ಅವರ ಪುತ್ರರನ್ನೂ ಪುತ್ರಿಯರನ್ನೂ ಕೊಂದುಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟುಬಿಡುವರು.