Ezekiel 24:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ನಿನಗೆ ಆ ಮನುಷ್ಯನೊಂದಿಗೆ ಮಾತನಾಡಲಾಗುವುದು. ನೀನು ಆಮೇಲೆ ಎಂದಿಗೂ ಮೌನವಾಗಿರುವುದಿಲ್ಲ. ಈ ರೀತಿಯಾಗಿ ನೀನು ಅವರಿಗೆ ಒಂದು ಮಾದರಿಯಾಗುವಿ. ನಾನು ಯೆಹೋವನೆಂದು ಆಗ ಅವರು ತಿಳಿಯುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.
Kannada BSI Bible 2016
ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವಿ, ನಿನ್ನ ಮೂಕತನವನ್ನು ಕಳಕೊಂಡು ಮಾತಾಡುವಿ; ಹೀಗೆ ನೀನು ಅವರಿಗೆ ಗುರುತಾಗಲು ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.
Kannada Bible (KNCL) BSI 2016
ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವೆ, ನಿನ್ನ ಮೂಕತನವನ್ನು ಕಳೆದುಕೊಂಡು ಮಾತಾಡುವೆ; ಹೀಗೆ ನೀನು ಅವರಿಗೆ ಗುರುತಾಗುವೆ. ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ, ಆಗ ನಾನೇ ಯೆಹೋವ ದೇವರೆಂದು ತಿಳಿಯುವರು.”