Ezekiel 24:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಯಾಕೆಂದರೆ ಆಕೆ ಸುರಿಸಿದ ರಕ್ತದ ಕಲೆಗಳು ಇನ್ನೂ ಇವೆ. ಆಕೆಯು ಆ ರಕ್ತವನ್ನು ನೆಲದ ಮೇಲೆ ಸುರಿಯದೆ ಘಂಡೆಯ ಮೇಲೆ ಸುರಿದು ಅದಕ್ಕೆ ಮಣ್ಣನ್ನೂ ಮುಚ್ಚಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.
Kannada BSI Bible 2016
ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇಮು ಸುರಿಸಿದ ರಕ್ತವು ಅದರಲ್ಲೇ ನಿಂತಿದೆ; ದೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ;
Kannada Bible (KNCL) BSI 2016
ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.