Ezekiel 24:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರಿಂದ ತುಂಬಿದ್ದ ನಗರಕ್ಕೆ ಕೇಡು ಉಂಟಾಗುವದು. ನಾನು ಸೌದೆಯ ಗುಡ್ಡೆಯನ್ನು ದೊಡ್ಡದು ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
Kannada BSI Bible 2016
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
Kannada Bible (KNCL) BSI 2016
ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಆ ರಕ್ತಾಪರಾಧವುಳ್ಳ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.