Ezekiel 25:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”
Kannada BSI Bible 2016
ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಎದೋಮು ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿತೀರಿಸಿ ಮಹಾಪರಾಧವನ್ನು ನಡಿಸಿದೆ;
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಎದೋಮ್ ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಏಕೆಂದರೆ ಎದೋಮು ಯೆಹೂದನ ಮನೆತನದವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿದ್ದರಿಂದ ಅತಿ ಅಪರಾಧಮಾಡಿ ಅವರಲ್ಲಿ ಸೇಡು ತೀರಿಸಿಕೊಂಡಿತು.